ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಸಿಜೆಪಿ (CJP) ನೇತೃತ್ವದ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಮೂಲಕ ಸಿಜೆಪಿ ನೇತೃತ್ವದ ವಿದ್ಯಾರ್ಥಿಗಳ (Students) ಹೋರಾಟಕ್ಕೆ ಜಯಸಿಕ್ಕಂತಾಗಿದೆ. ಧಮೇಂದ್ರ ಪ್ರಧಾನ್ (Dharmendra Pradhan) ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ಸಲ್ಲಿಕೆ ಮಾಡಿದ್ದಾರೆ. ಈ ಪ್ರಮುಖ ರಾಜಕೀಯ ಬೆಳವಣಿಗೆಯ ನಂತರ, ಎಲ್ಲೆಡೆ ಚರ್ಚೆಗಳು ಜೋರಾಗಿವೆ.
ಧಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಭಾರತದಲ್ಲಿ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದವರು ಯಾರು? ಅವರ ರಾಜೀನಾಮೆಗೆ ಕಾರಣವೇನು? ಅನ್ನೋ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: Delhi Protest: ಜಂತರ್ ಮಂತರ್ ಪ್ರತಿಭಟನೆ ಅಂತ್ಯಗೊಳಿಸಿದ ಸಿಜೆಪಿ! ಕೇಂದ್ರದ ಮುಂದೆ ಇಟ್ಟ ಬೇಡಿಕೆಗಳೇನು?
ಭಾರತದ ಸ್ವಾತಂತ್ರ್ಯದ ನಂತರ, ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರನ್ನು ಪ್ರಧಾನಿ ಜವಾಹರಲಾಲ್ ನೆಹರು ಅವರ ತಮ್ಮ ಮೊದಲ ಸಚಿವ ಸಂಪುಟದಲ್ಲಿ ಕೈಗಾರಿಕೆ ಮತ್ತು ಪೂರೈಕೆ ಸಚಿವರನ್ನಾಗಿ ನೇಮಿಸಿದ್ದರು. ಆದ್ರೆ, ಶ್ಯಾಮ ಪ್ರಸಾದ್ ಮುಖರ್ಜಿ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ವಿದಾಯ ಹೇಳಿದ ಮೊದಲ ವ್ಯಕ್ತಿಯಾಗಿದ್ದಾರೆ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಏಪ್ರಿಲ್ 6, 1950 ರಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದರು.
ರಾಜೀನಾಮೆ ನೀಡಲು ಕಾರಣವೇನು?
ಆ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ‘ನೆಹರು-ಲಿಯಾಕತ್ ಒಪ್ಪಂದ’ (ದೆಹಲಿ ಒಪ್ಪಂದ) ಶ್ಯಾಮ ಪ್ರಸಾದ್ ಮುಖರ್ಜಿ ಅವರ ರಾಜೀನಾಮೆಗೆ ಮುಖ್ಯ ಕಾರಣ ಅಂತಾ ಹೇಳಲಾಗಿದೆ. ಭಾರತ ಮತ್ತು ಪಾಕಿಸ್ತಾನ ವಿಭಜನೆಯ ನಂತರ ಉಭಯ ದೇಶಗಳಲ್ಲಿನ ಅಲ್ಪಸಂಖ್ಯಾತರ ರಕ್ಷಣೆ ಮತ್ತು ಹಕ್ಕುಗಳಿಗೆ ಸಂಬಂಧಿಸಿದಂತೆ ಈ ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು. ಆದ್ರೆ, ಪಾಕಿಸ್ತಾನದಲ್ಲಿ ಹಿಂದೂ ಅಲ್ಪಸಂಖ್ಯಾತರ ಹಿತರಕ್ಷಣೆಯನ್ನು ಕಡೆಗಣಿಸಲಾಗಿದೆ ಎಂದು ಮುಖರ್ಜಿ ಅವರು ಈ ಒಪ್ಪಂದವನ್ನು ತೀವ್ರವಾಗಿ ವಿರೋಧಿಸಿದ್ದರು. ಶ್ಯಾಮ್ ಪ್ರಸಾದ್ ಅವರ ಬೇಡಿಕೆಗಳು ಈಡೇರದಿದ್ದಾಗ, ಪ್ರಧಾನಿ ನೆಹರು ಸಂಪುಟದಿಂದ ಹೊರ ನಡೆದರು.
ಹೊಸ ಪಕ್ಷ ಸ್ಥಾಪಿಸಿದ ಶ್ಯಾಮ್ ಪ್ರಸಾದ್ ಮುಖರ್ಜಿ
1951 ರಲ್ಲಿ ನೆಹರು ಸರ್ಕಾರದಿಂದ ಬೇರ್ಪಟ್ಟ ನಂತರ, ಶ್ಯಾಮ ಪ್ರಸಾದ್ ಮುಖರ್ಜಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಬೆಂಬಲದೊಂದಿಗೆ ಭಾರತೀಯ ಜನಸಂಘ (ಬಿಜೆಎಸ್) ಸ್ಥಾಪಿಸಿದರು, ಅದು ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ಆಯಿತು. ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ವಿಧಿಸಲಾದ ವಿಶೇಷ ಸ್ಥಾನಮಾನದ 370 ನೇ ವಿಧಿಯ ವಿರುದ್ಧ ಹೋರಾಟ ಮಾಡಿದ್ದರು.
ಶ್ಯಾಮ ಪ್ರಸಾದ್ ಮುಖರ್ಜಿ ಅವರ ರಾಜೀನಾಮೆಯ ಬೆನ್ನಲ್ಲೇ, ಆಗ ಕಾನೂನು ಸಚಿವರಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ರೈಲ್ವೆ ಮತ್ತು ಸಾರಿಗೆ ಸಚಿವರಾಗಿದ್ದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಕೂಡ ವಿವಿಧ ವಿಷಯಗಳ ಕುರಿತು ಸಂಪುಟಕ್ಕೆ ರಾಜೀನಾಮೆಯನ್ನು ನೀಡಿದ್ದರು.














