ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ (Delhi) ಅಕ್ಷರಶಃ ರಣಾಂಗಣವಾಗಿ ಬದಲಾಗಿದೆ. ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (Cockroach Janata Party) ಕಾರ್ಯಕರ್ತರು ಪ್ರತಿಭಟನೆ ವೇಳೆ ಪೊಲೀಸರು
ಲಾಠಿಚಾರ್ಜ್ ಮಾಡಿದರು. ಲಾಠಿಚಾರ್ಜ್ ಖಂಡಿಸಿ ಕಾಂಗ್ರೆಸ್ ನಾಯಕರು ದೆಹಲಿಯ ಪ್ರಧಾನಿ ನಿವಾಸದ (PM House) ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ (Rahul Gandhi), ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್, ಪವನ್ ಖೇರಾ ಮತ್ತು ಇತರ ಕಾಂಗ್ರೆಸ್ ನಾಯಕರು ಪ್ರತಿಭಟಿಸುತ್ತಿದ್ದಾರೆ. ಈ ವೇಳೆ ನೀಟ್ (NEET) ಅಕ್ರಮ ಹಾಗೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಾಯಕರು ಒತ್ತಾಯ ಮಾಡಿದರು. ಇನ್ನು ಪ್ರತಿಭಟನೆ ಜೋರಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ದೆಹಲಿಯ 7 ಲೋಕ ಕಲ್ಯಾಣ್ ಮಾರ್ಗ್ (ಪ್ರಧಾನಿ ನಿವಾಸ)ದ ಪ್ರವೇಶದ್ವಾರದಲ್ಲಿ ಗದ್ದಲ, ಗಲಾಟೆ ಉಂಟಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ಮೋದಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು ಹಿಡಿದ ಕಾಂಗ್ರೆಸ್ ನಾಯಕರು ಪ್ರಧಾನಿ ನಿವಾಸದ ಮುಂದೆ ಧರಣಿ ಕುಳಿತಿದ್ದರು.
ಇದನ್ನೂ ಓದಿ: Congress Protest: ದೆಹಲಿಯಲ್ಲಿ ಕಾಂಗ್ರೆಸ್ ದಿಢೀರ್ ಪ್ರತಿಭಟನೆ! ಪ್ರಧಾನಿ ನಿವಾಸದ ಮುಂದೆ ಸಿಎಂ ಡಿಕೆಶಿ ಸೇರಿದಂತೆ ಕೈ ನಾಯಕರು ಧರಣಿ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಶಕ್ಕೆ
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು. ಆದ್ರೆ, ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಅಲರ್ಟ್ ಆದ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಬಳಿಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಸೇರಿದಂತೆ ಅನೇಕ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.














