ರಾಮನಗರ (ಜು.20): ಬೆಂಗಳೂರು ನಗರದ ಹೊರವಲಯದಲ್ಲಿ ಬಿಡದಿ ಟೌನ್ಶಿಪ್ ನಿರ್ಮಿಸಲು ಸುಮಾರು 516 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ‘ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್’ ಯೋಜನೆಗಾಗಿ
ವಶಪಡಿಸಿಕೊಳ್ಳುವುದಕ್ಕೆ ಮುಂದಾಗಿದ್ದು, ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ರು. ಇಂದು ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ನ್ಯಾಯಪೀಠ ಮಹತ್ವದ ತೀರ್ಪು ನೀಡಿದೆ.
ಪಿಐಎಲ್ ಅರ್ಜಿ ವಜಾ
ಬಿಡದಿ ಟೌನ್ ಶಿಪ್ ಪ್ರಶ್ನಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನ ಸಿಜೆ ವಿಭು ಬಕ್ರು ನೇತೃತ್ವದ ಹೈಕೋರ್ಟ್ ಕೈಗೆತ್ತಿಕೊಂಡಿದ್ದು ವಾದ ಆಲಿಸಿತು. ಭೂಸ್ವಾಧೀನಕ್ಕೂ ಮುನ್ನ ಸಾಮಾಜಿಕ ಪರಿಣಾಮ ಅಧ್ಯಯನ ನಡೆಸಿಲ್ಲ. ಪುನರ್ವಸತಿಗೆ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ವಕೀಲರು ವಾದ ಮಂಡಿಸಿದ್ರು.
ಯೋಜನೆ ವಿರೋಧಿಸಿ ರೈತರ ಪ್ರತಿಭಟನೆ
ಸಾರ್ವಜನಿಕ ಹಿತಾಸಕ್ತಿಯಿಲ್ಲದ ರಿಯಲ್ ಎಸ್ಟೇಟ್ ಯೋಜನೆ. ಈ ಯೋಜನೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆಂದು ವಾದ ಎಂದು ಅರ್ಜಿದಾರ ಮೈಸೂರಿನ ರಾಜೇಶ್ ಕೆ.ಬಿ ಪರ ವಕೀಲರು ವಾದಿಸಿದ್ರು.
ವಿಭಾಗೀಯ ಪೀಠ ಪ್ರಶ್ನೆ
ಇದೇ ವೇಳೆ ಯಾವ ಕಾಯ್ದೆಯ ಯಾವ ಕಾನೂನು ಉಲ್ಲಂಘನೆಯಾಗಿದೆ ತಿಳಿಸಿ ಎಂದು ಅರ್ಜಿದಾರರಿಗೆ ಸಿಜೆ ನೇತೃತ್ವದ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ. ಹೊಸ ಕಾಯ್ದೆಯಡಿ ಭೂಸ್ವಾಧೀನ ಮಾಡಿಲ್ಲವೆಂದ ವಕೀಲರಿಗೆ ಸ್ವಾಧೀನಕ್ಕೆ ಕೆಯುಡಿ ಕಾಯ್ದೆ, ಪರಿಹಾರಕ್ಕೆ ಹೊಸ ಕಾಯ್ದೆ ಅನ್ವಯಿಸಿದ್ದಾರೆ ಎಂದು ತಿಳಿಸಿದ್ದಾರೆ.
ಅರ್ಜಿದಾರರ ವಾದ ತಿರಸ್ಕರಿಸಿದ ಮುಖ್ಯನ್ಯಾಯಮೂರ್ತಿ ವಿಭು ಭಖ್ರು ಅವರ ಪೀಠ ಪಿಐಎಲ್ ವಜಾಗೊಳಿಸಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಕಂಪ್ಲಾಪುರ ಗ್ರಾಮದ ಸಾಮಾಜಿಕ ಕಾರ್ಯಕರ್ತರಾದ ರಾಜೇಶ್ ಕಂಪ್ಲಾಪುರ ಬಸವಣ್ಣ ಎಂಬುವರು ಈ ಬಗ್ಗೆ ಅರ್ಜಿ ಸಲ್ಲಿಸಿದ್ರು.
ಬಿಡದಿಯ ಬಳಿ 516 ಎಕರೆ ಜಮೀನು ಭೂ ಸ್ವಾಧೀನಪಡಿಸಿಕೊಳ್ಳುವ ಸಂಬಂಧ 2026ರ ಜೂನ್ 13ರಂದು ಹೊರಡಿಸಿರುವ ಅಂತಿಮ ಅಧಿಸೂಚನೆ ರದ್ದುಪಡಿಸಬೇಕು. ಕೃಷಿ ಭೂಮಿಯನ್ನು ನಾಶಪಡಿಸುವ ಬದಲು, ಉತ್ತರ ಕರ್ನಾಟಕದ ಬರಪೀಡಿತ ಅಥವಾ ಕೈಗಾರಿಕಾ ಭೂ ಬ್ಯಾಂಕ್ ಗಳಿರುವ ಹಿಂದುಳಿದ ಪ್ರದೇಶಗಳಿಗೆ ಈ ಯೋಜನೆಯನ್ನು ವಿಕೇಂದ್ರೀಕರಿಸಲು ತಜ್ಞರ ಸಮಿತಿ ರಚಿಸಬೇಕು. ಅಲ್ಲಿಯವರೆಗೆ ಈ ಯೋಜನೆಗೆ ಸಂಬಂಧಿಸಿದ ಎಲ್ಲಾ ಭೂಸ್ವಾಧೀನ ಮತ್ತು ಟೆಂಡರ್ ಪ್ರಕ್ರಿಯೆಗಳಿಗೆ ತಕ್ಷಣ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಇದನ್ನೂ ಓದಿ: Chennamma-Revanna: ಇಂದಿಗೂ ರೇವಣ್ಣರನ್ನ ಕಾಡ್ತಿದೆ ಅಮ್ಮನ ಈ ಒಂದು ನೋವು, ಇತ್ತ ಅತ್ತೆ ಸಾವಿಗೆ ಕಣ್ಣೀರಾದ ಭವಾನಿ
(ವರದಿ: ಗಂಗಾಧರ್, ನ್ಯೂಸ್18 ಕನ್ನಡ, ಬೆಂಗಳೂರು)














